ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂ-ವೈಟ್ ಫೀಲ್ಡ್ ನಮ್ಮ ಮೆಟ್ರೋ ಸೇವೆಗೆ ಕೌಂಟ್ ಡೌನ್ ಶುರುವಾಗಿದ್ದು, ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ವೈಟ್ಫೀಲ್ಡ್ನಿಂದ ಕೆಆರ್ ಪುರಂವರೆಗಿನ 13.71 ಕಿಮೀ ಉದ್ದದ ಆರ್-1 ವಿಸ್ತರಣಾ ಮಾರ್ಗದ ಅಂತಿಮ ಹಂತದ ಟ್ರಯಲ್ ರನ್ ಅನ್ನು ರೈಲ್ವೆ ಸೇಫ್ಟಿ ಕಮಿಷನ್ ಈಗಾಗಲೆ ನಡೆಸಿದೆ. ಕೆಆರ್ ಪುರಂ-ವೈಟ್ ಫೀಲ್ಡ್ ನೇರಳೆ ಮಾರ್ಗ ಐಟಿ ಉದ್ಯೋಗಿಗಳಿಗೆ ಸಹಾಯಕವಾಗಲಿದೆ. ಈ ಮಾರ್ಗದಲ್ಲಿ ಗಂಟೆಗೆ 80 ಕಿ. ಮೀ. ವೇಗದಲ್ಲಿ ನಮ್ಮ ಮೆಟ್ರೋ ರೈಲುಗಳನ್ನು ಓಡಿಸಿ ಪರೀಕ್ಷೆ ನಡೆಸಲಾಗಿದೆ.
13 ಕಿ. ಮೀ. ಮಾರ್ಗವನ್ನು 12 ನಿಮಿಷಗಳಲ್ಲಿ ರೈಲು ಕ್ರಮಿಸಿದೆ. ಇನ್ನೂ ನಿಲ್ದಾಣಗಳಲ್ಲಿ ಸೀಮಿತ ದ್ವಿಚಕ್ರ ವಾಹನ ನಿಲುಗಡೆ ಮತ್ತು ಕೆಆರ್ ಪುರಂ ಮತ್ತು ವೈಟ್ಫೀಲ್ಡ್ ನಿಲ್ದಾಣಗಳಲ್ಲಿ ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಹೆಚ್ಚುವರಿ ಪಾರ್ಕಿಂಗ್ ಸೌಲಭ್ಯ ಇದೆ. ನಿಲ್ದಾಣಗಳ ಸುತ್ತಲೂ ಇರುವ ಸೇವಾ ರಸ್ತೆಗಳ ಎರಡೂ ಬದಿಯಲ್ಲಿ, ಪ್ರವೇಶ ಮತ್ತು ನಿರ್ಗಮನ ದ್ವಾರದೊಂದಿಗೆ ಬಿಎಂಟಿಸಿ ಬಸ್ ನಿಲ್ದಾಣಗಳು ಮಲ್ಟಿಮೋಡಲ್ ಏಕೀಕರಣ ಕೇಂದ್ರ ಇರಲಿದೆ. ರಸ್ತೆಗಳನ್ನು ದಾಟಲು ಎಲ್ಲ ನಿಲ್ದಾಣಗಳನ್ನು ಪಾದಚಾರಿಗಳ ಮೇಲ್ಸೇತುವೆಯಾಗಿ ಉಪಯೋಗಿಸಬಹುದು. ಪ್ರಯಾಣಿಕರ ಅನುಕೂಲಕ್ಕಾಗಿ, ಪ್ರತಿ ನಿಲ್ದಾಣದಲ್ಲಿ 8 ಎಸ್ಕಲೇಟರ್ಗಳು, 4 ಎಲಿವೇಟರ್ಗಳು ಮತ್ತು 8 ಮೆಟ್ಟಿಲುಗಳ ಅಳವಡಿಸಲಾಗಿದೆ.