ದೆಹಲಿ: ಕೃಷ್ಣ ಮೇಲ್ದಂಡೆ ಯೋಜನೆ ವಿಚಾರವಾಗಿ ಐದು ಸಾವಿರ ಕೋಟಿ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಎಐಬಿಪಿಯಿಂದ ಅನುದಾನ ಪಡೆಯಲು ಕೇಂದ್ರ ಸರ್ಕಾರ ಹೇಳಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಇದು ರಾಷ್ಟ್ರೀಯ ಯೋಜನೆಯೆಂದು ಘೋಷಿಸಲು ಮನವಿ ಮಾಡಿದೆ. ಎಐಬಿಪಿಯಲ್ಲಿ 60:40 ಹಣ ನೀಡಲಾಗುತ್ತೆ. ಹೀಗಾಗಿ ಹಣಕಾಸು ಇಲಾಖೆ ಜೊತೆಗೆ ಚರ್ಚಿಸಲು ನಿರ್ಧರಿಸಿದೆ. ಇನ್ನು ಕೆಲವು ಯೋಜನೆಗಳಿಗೆ ಹೆಚ್ಚಿನ ಹಣಕ್ಕೆ ಮನವಿ ಮಾಡಿದ್ದೇನೆ ಎಂದಿದ್ದಾರೆ.
ಅಕ್ಕಿ ಸಿಗದಿದ್ರೆ ಹಣ ನೀಡುವಂತೆ ಬಿಜೆಪಿಯವರೇ ಸಲಹೆ ನೀಡಿದ್ದರು. ತಾತ್ಕಾಲಿಕವಾಗಿ ಅಕ್ಕಿ ಬದಲು ನಾವು ಜನರಿಗೆ ಹಣ ನೀಡುತ್ತಿದ್ದೇವೆ. ನಮ್ಮ ರಾಜ್ಯದಲ್ಲೇ ಅಕ್ಕಿ ಸಂಗ್ರಹ ಮಾಡಲು ಚಿಂತನೆ ಇದೆ ಎಂದು ಹೇಳಿದರು.
5 ಕೆಜಿ ಸೇರಿ 10 ಕೆಜಿ ಅಕ್ಕಿ ಕೊಡುವುದಾಗಿ ಮಾತು ಕೊಟ್ಟಿದ್ದೆವು. ಕೊಟ್ಟ ಮಾತು ಉಳಿಸಿಕೊಳ್ಳಲು ಜನರ ಖಾತೆಗೆ ಹಣ ವರ್ಗಾವಣೆ ಮಾಡಲು ಮುಂದಾಗಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.