ಶ್ರೀರಂಗಪಟ್ಟಣ: ಕೆಆರ್ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು ಜು. 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ಶಾಸಕ ಹಾಗೂ ಸೆಸ್ಕ್ ಅಧ್ಯಕ್ಷ ಎ.ಬಿ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಬೆಳ್ಳಂಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಕೆ ಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಲಾಶಯದ ಸ್ಥಿತಿ ಗತಿ, ನೀರಿನ ಲಭ್ಯತೆ, ಒಳ ಮತ್ತು ಹೊರ ಹರಿವಿನ ಪ್ರಮಾಣ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ ಸಮಾಲೋಚನೆ ನಡೆಸಿದರು.
ಜಲಾಶಯಕ್ಕೆ ಭೇಟಿ ನೀಡಿ ಮಾತನಾಡಿದ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ “ಜಿಲ್ಲೆಯ ಜೀವನಾಡಿ ಕೆಆರ್ಎಸ್ ಡ್ಯಾಂ ಭರ್ತಿಯಾಗಿರುವುದರಿಂದ ರೈತಾಪಿ ವರ್ಗದಲ್ಲಿ ಸಂತಸ ಮನೆ ಮಾಡಿದೆ. ಹೀಗಾಗಿ ಜು. 27ರಂದು ಜಲಾಶಯಕ್ಕೆ ಮುಖ್ಯಮಂತ್ರಿ ಬಾಗಿನ ಅರ್ಪಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಈ ಭಾಗದ ಸಂಸದರು, ಶಾಸಕರು ಎಲ್ಲರೂ ಭಾಗವಹಿಸಲಿದ್ದಾರೆ” ಎಂದು ಹೇಳಿದರು.