ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರ ನಿವಾಸಕ್ಕೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದರು. ಮೃತ ನೌಕರನ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, 3 ಲಕ್ಷ ರೂ. ವೈಯಕ್ತಿಕ ಧನ ಸಹಾಯ ಮಾಡಿದರು.
ಶಿವಮೊಗ್ಗದ ಕೆಂಚಪ್ಪ ಬಡಾವಣೆಯಲ್ಲಿರುವ ಚಂದ್ರಶೇಖರ್ ಮನೆಗೆ ಈಶ್ವರಪ್ಪ ಭೇಟಿ ನೀಡಿದರು. ಚಂದ್ರಶೇಖರ್ ಪತ್ನಿ ಕವಿತಾ ಹಾಗೂ ಮಕ್ಕಳಿಗೆ ಸಾಂತ್ವನ ಹೇಳಿದರು. ನಿಮ್ಮೊಂದಿಗೆ ನಾವಿದ್ದೇವೆಂದು ಧೈರ್ಯ ತುಂಬಿದರು.