ಬೆಂಗಳೂರು ;ಇಂದು ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಗಮದಲ್ಲಿ ಸರ್ಚ್ ವಾರೆಂಟ್ ಪಡೆದು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಗಮದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮಾಡಾಳ್ ವಿರುಪಾಕ್ಷಪ್ಪ ಅವರ ಅವಧಿಯಲ್ಲಿ ಸಾಬೂನು ಹಾಗೂ ಮಾರ್ಜಕ ತಯಾರಿಸಲು ರಾಸಾಯನಿಕವನ್ನು ಆಮದು ಮಾಡಿಕೊಳ್ಳಲು ಕರೆಯಲಾಗಿದ್ದ ಟೆಂಡರ್ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು.
ಶಿವಶಂಕರ್ ಸೇರಿದಂತೆ ಹಲವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಲಯದಿಂದ ದಾಳಿಗೆ ಅನುಮತಿ ಪಡೆಯಲಾಗಿತ್ತು. ಓರ್ವ ಡಿವೈಎಸ್ಪಿ ಹಾಗೂ 10 ಮಂದಿ ಇನ್ಸ್ಪೆಕ್ಟರ್ಗಳ ನೇತೃತ್ವದಲ್ಲಿ ಕೆಎಸ್ಡಿಎಲ್ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.