ಬೆಂಗಳೂರು: ನಾಗಮಂಗಲ KSRTC ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ನಿಯಮ 60ರ ಅಡಿ ಚರ್ಚೆಗೆ ಅವಕಾಶ ಕೊಡುವಂತೆ ಸ್ಪೀಕರ್ಗೆ ಮಾಜಿ ಸಿಎಂ H.D.ಕುಮಾರಸ್ವಾಮಿ ಮನವಿ ಪತ್ರ ನೀಡಿದ್ದಾರೆ.
ಚರ್ಚೆಗೆ ಸಮಯ ಕೊಡುವಂತೆ JDS ಸದಸ್ಯರು ಪಟ್ಟು ಹಿಡಿಯಲಿದ್ದು ಪ್ರಕರಣದ ಹಿಂದೆ ಚಲುವರಾಯಸ್ವಾಮಿ ಇದ್ದಾರೆ. ಅವರ ರಾಜೀನಾಮೆಗೆ JDS ಶಾಸಕರು ಒತ್ತಾಯಿಸಲಿದ್ದಾರೆ.
ಆತ್ಮಹತ್ಯೆ ಯತ್ನಿಸಿದ KSRTC ನೌಕರ ವೆಂಟಿಲೇಟರ್ನಲ್ಲಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇನ್ನೂ 48 ಗಂಟೆ ಐಸಿಯುನಲ್ಲೇ ಇಡಬೇಕಾಗುತ್ತದೆ ಅಂತಾ ವೈದ್ಯರು ಹೇಳಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದು 50 ದಿನ ಆಗಿಲ್ಲ. ಆಗಲೇ ಇಷ್ಟು ದ್ವೇಷದ ರಾಜಕಾರಣ ಶುರುವಾಗಿದೆ. ದುಡ್ಡು ತೆಗೆದುಕೊಂಡು ವರ್ಗಾವಣೆ ಮಾಡ್ತಿದ್ದಾರೆ. ಚುನಾವಣೆಗೆ ಖರ್ಚು ಮಾಡಿದ ಹಣ ಮತ್ತೆ ವಾಪಸ್ ಪಡೆಯೋದಕ್ಕೆ ವರ್ಗಾವಣೆ ದಂಧೆ ಶುರುಮಾಡಿದ್ದಾರೆ. ಆದ್ರೆ ಜೀವಗಳ ಜೊತೆ ಚೆಲ್ಲಾಟ ಆಡುವ ಇಂತಹ ಚಿಲ್ಲರೆ ರಾಜಕಾರಣ ಮಾಡೋದು ಸರಿಯಲ್ಲ. ಇದನ್ನ ಸುಮ್ಮನೆ ಬಿಡಲ್ಲ ಎಂದು ಗುಡುಗಿದರು.