ಬೆಂಗಳೂರು:- ಕುಂಬಳಗೋಡು ಪೊಲೀಸ್ ಠಾಣೆ ನೂತನ ಕಟ್ಟಡವನ್ನು ಗೃಹ ಸಚಿವ ಜಿ ಪರಮೇಶ್ವರ್ ಅವರು ಬುಧವಾರ ಉದ್ಘಾಟನೆ ಮಾಡಿದರು.
ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಅವರು ಮುಖ್ಯ ಅತಿಥಿಯಾಗಿ ಭಾಗಿಯಾಗಿದರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಇನ್ನೂ ಈ ಪೊಲೀಸ್ ಠಾಣೆಯ ನೂತನ ಕಟ್ಟಡದಲ್ಲಿ ಮಹಿಳಾ ಪೊಲೀಸರಿಗೆ ಪ್ರತ್ಯೇಕ ಶೌಚಗೃಹ, ವಿಶ್ರಾಂತಿ ಗೃಹ, ರಾತ್ರಿ ಉಳಿಯಲು ಕೊಠಡಿ ಇರುವುದು ವಿಶೇಷವಾಗಿದೆ. ದೂರುದಾರರು ಮತ್ತು ಸಾರ್ವಜನಿಕರು ಠಾಣೆಗೆ ಬಂದಾಗ ಅವರಿಗೆ ಕೂರಲು ಸ್ಥಳ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಒದಗಿಸಲಾಗಿದೆ. ಹಳೆಯ ಕೇಸ್ಗಳಿಗೆ ಸಂಬಂಧಿಸಿದ ರೆಕಾರ್ಡ್, ಜಪ್ತಿ ಮಾಡಿದ ವಸ್ತುಗಳ, ಸಶಸಗಳ ಸಂಗ್ರಹ ಸೇರಿದಂತೆ ಪ್ರತಿಯೊಂದು ವಿಭಾಗಕ್ಕೂ ಪ್ರತ್ಯೇಕ ಕೊಠಡಿ ನಿರ್ಮಾಣ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ್, ಡಿಜಿಪಿ ಡಾ.ಕೆ. ರಾಮಚಂದ್ರ ರಾವ್, ಐಜಿಪಿ ಡಾ.ಬಿ. ಆರ್. ರವಿಕಾಂತೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಎಎಸ್ಪಿ ಟಿ.ವಿ. ಸುರೇಶ್, ಡಿವೈಎಸ್ಪಿ ಪ್ರವೀಣ್, ಕುಂಬಳಗೂಡು ಠಾಣೆ ಇನ್ಸ್ಪೆಕ್ಟರ್ ಶಿವಾರೆಡ್ಡಿ ಉಪಸ್ಥಿತರಿದ್ದರು.