ಹುಬ್ಬಳ್ಳಿ: ರಾಜ್ಯ ಸರ್ಕಾರ ಇಂದು ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಧಾರವಾಡ ಜಿಲ್ಲೆಗೆ ಕಲಘಟಗಿ ಮತ ಕ್ಷೇತ್ರದಿಂದ ಆಯ್ಕೆಯಾ ಸಂತೋಷ ಲಾಡ್ ಅವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದೆ. ಸಂತೋಷ ಲಾಡ್ ಅವರಿಗೆ ಕಾರ್ಮಿಕ ಸಚಿವ ಖಾತೆ ನೀಡಿದ್ದ ಸರ್ಕಾರ ಇದೀಗ ಅವರನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿಯೂ ನೇಮಕ ಮಾಡಿದೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಹಾಗೂ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳಕರ ಹಾಗೂ ಸಂತೋಷ ಲಾಡ್ ಮಧ್ಯೆ ಧಾರವಾಡ ಜಿಲ್ಲಾ ಉಸ್ತುವಾರಿಗಾಗಿ ಪೈಪೋಟಿ ಏರ್ಪಟ್ಟಿತ್ತು. ಕೊನೆಗೆ ಸರ್ಕಾರ ಧಾರವಾಡ ಜಿಲ್ಲಾ ಉಸ್ತುವಾರಿ ಹೊಣೆಯನ್ನು ಸಂತೋಷ ಲಾಡ್ ಹೆಗಲಿಗೆ ನೀಡುವ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.