ಯುಗಾದಿ ರಥೋತ್ಸವಕ್ಕೆ ರಾಜ್ಯ ಅಷ್ಟೇ ಅಲ್ಲದೇ, ತಮಿಳುನಾಡನಿಂದಲೂ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ಹರಕೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಯುಗಾದಿ ರಥೋತ್ಸವ ಮಲೆ ಮಹದೇಶ್ವರ ಬೆಟ್ಟದಲ್ಲಿ ಲಕ್ಷಾಂತರ ಮಂದಿ ಭಾಗಿ
ಚಾಮರಾಜನಗರ – ಕರ್ನಾಟಕದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಯುಗಾದಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಅದರಂತೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಬೆಳಗ್ಗೆ 8 ರಿಂದ 9 ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ನಡೆಯಿತು.
ದೇಗುಲದ ಮುಖ್ಯದ್ವಾರದ ಅವರಣದಿಂದ ಸತ್ತಿಗೆ ಸೂರಿಪಾನಿ, ಛತ್ರಿ, ಚಾಮರ, ನಂದಿ ಧ್ವಜ ಹಾಗೂ ಮಂಗಳವಾದ್ಯದೊಂದಿಗೆ ತೇರು ಎಳೆಯಲಾಯಿತು. ಹುಲಿವಾಹನ, ಬಸವ ವಾಹನ ಹಾಗೂ ರುದ್ರಾಕ್ಷಿ ವಾಹನೋತ್ಸವವು ನಡೆಯಿತು. ವೀರಗಾಸೆ ಕುಣಿತ ಭಕ್ತಾದಿಗಳ
