ಬೆಂಗಳೂರು ;- ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸುತ್ತಿರುವ ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರಕ್ಕೆ ಹೃದಯ, ಕಣ್ಣು, ಕಿವಿ ಏನು ಇಲ್ಲ.
ಬಿಜೆಪಿ ನಾಯಕರು ಎಲೆಕ್ಷನ್ ಬಂದಾಗ ಜನರ ಹತ್ತಿರ ಬರುತ್ತಾರೆ. ಆದರೆ, ಇವತ್ತು ಬಡವರಿಗೆ ನೀಡಬೇಕಾದ ಅಕ್ಕಿಯನ್ನು ತಡೆ ಹಿಡಿದಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.
ಕೇಂದ್ರಕ್ಕೆ ಬಿಸಿ ಮುಟ್ಟುತ್ತೊ ಇಲ್ವೊ, ಆಮೇಲೆ ನೋಡೋಣ. ಮೊದಲು 25 ಜನ ಸಂಸದರು ಕಣ್ಣು ತೆಗೆಯಲಿ ಎಂದು ಹೆಬ್ಬಾಳ್ಕರ್ ವಾಗ್ಧಾಳಿ ನಡೆಸಿದ್ದಾರೆ.
ಇನ್ನೂ ಅಕ್ಕಿ ಪೂರೈಕೆ ವಿಚಾರ ತಾರಕಕ್ಕೇರಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ತೀವ್ರ ಪ್ರತಿಭಟನೆ ನಡೆಸಿದೆ.