ಚಿತ್ರದುರ್ಗ: ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರವೇ ಮನೆ ಯಜಮಾನಿಯರ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದುವರೆಗೆ 11 ತಿಂಗಳ ಮೊತ್ತ ಸಂದಾಯವಾಗಿದ್ದು,
ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 ಸಾವಿರ ಕೋಟಿ ರೂ ಮೊತ್ತವನ್ನು ಯೋಜನೆಗೆ ವ್ಯಯಿಸಲಾಗಿದೆ ಎಂದರು.