ಗದಗ: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಸಬಾ ಗ್ರಾಮದಲ್ಲಿ ಮಣ್ಣು ಕುಸಿತದಿಂದ ಮೃತಪಟ್ಟ ಮುಂಡರಗಿ ತಾಲೂಕಿನ ಬಿದರಳ್ಳಿ ಗ್ರಾಮದ ಚಂದ್ರಶೇಖರ್ ಕಳಸಾಪೂರ ಕುಟುಂಬಕ್ಕೆ 2 ಲಕ್ಷ ರೂಪಾಯಿ, ಹಿರೇವಡ್ಡಟ್ಟಿ ಗ್ರಾಮದ ಸೋಮಶೇಖರ ಕಳಸದ, ಶಾಂತ ಕಳಸದ ಕುಟುಂಬಕ್ಕೆ 4 ಲಕ್ಷ 86 ಸಾವಿರ ರೂಪಾಯಿ ಪರಿಹಾರವನ್ನು ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪರಿಹಾರ ಒದಗಿಸಿದ್ದಾರೆ.
ಈ ವೇಳೆ ಮಾತನಾಡಿದ ಕಾರ್ಮಿಕ ನಿರೀಕ್ಷಕ ಭಾಗ್ಯವಂತ ಪತ್ತಾರ್ ಕಾರ್ಮಿಕರಿಗೆ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳಿವೆ ಇದರ ಸದುಪಯೋಗವನ್ನು ಕಾರ್ಮಿಕರು ಉಪಯೋಗಿಸಿಕೊಳ್ಳಬೇಕು ಮತ್ತು ಮೃತಪಟ್ಟ ಬಿದರಳ್ಳಿ, ಹಿರೇವಡ್ಡಟ್ಟಿ ಗ್ರಾಮದ ಈ ಎರಡು ಕುಟುಂಬಗಳಿಗೆ ಕಾರ್ಮಿಕರ ಕಾರ್ಡ್ ಇಲ್ಲದಿದ್ದರೂ ಕೂಡ ಮಾನವೀಯತೆ ದೃಷ್ಟಿಯಿಂದ ಆ ಕುಟುಂಬಗಳಿಗೆ ಸಹಾಯ ಮಾಡಿದ್ದೇವೆ ಎಂದು ತಿಳಿಸಿದರು. ಈ ವೇಳೆ ಕಾರ್ಮಿಕ ನಿರೀಕ್ಷಕರು ಉಪಸ್ಥಿತರಿದ್ದರು