ದಕ್ಷಿಣ ಕನ್ನಡ:- ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಮಂಗಳೂರು ನಗರದ ಬಲ್ಮಠ ಬಳಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸಿದೆ.
ಮಣ್ಣಿನಡಿಯಲ್ಲಿರುವ ಕಾರ್ಮಿಕರ ಜೊತೆ ರಕ್ಷಣಾ ತಂಡದ ಸಿಬ್ಬಂದಿಗಳು ಸಂಪರ್ಕ ಸಾಧಿಸಿದ್ದು, ಅವಶೇಷದಡಿ ಸಿಲುಕಿದ್ದ ಓರ್ವ ಕೂಲಿ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ. ಇನ್ನು ಘಟನೆ ವಿಷಯ ತಿಳಿಯುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.