ಬೆಂಗಳೂರು: ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ನಾಳೆ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಇನ್ನು ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಿಗೂ ಆಹ್ವಾನ ನೀಡಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಆಹ್ವಾನಿಸಲಾಗಿದೆ. ನಾಳೆ 11 ಗಂಟೆಗೆ ಶಕ್ತಿ ಯೋಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತೆ.
ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ವಾಗತಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯನವರು “ಶಕ್ತಿ” ಯೋಜನೆ ಲೋಗೋ ಅನಾವರಣಗೊಳಿಸುತ್ತಾರೆ. ಬಳಿಕ ಸ್ಮಾರ್ಟ್ ಕಾರ್ಡ್ ಮಾಡೆಲ್ ಅನಾವರಣಗೊಳಿಸಲಾಗುತ್ತೆ. ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆ ಕುರಿತು ಭಾಷಣ ಮಾಡುತ್ತಾರೆ. ವಿಧಾನ ಸೌಧದ ಮುಂಭಾಗ 4 ನಿಗಮದ ಸಾಮಾನ್ಯ ಬಸ್ ನಿಲ್ಲಿಸಲು ಫ್ಲಾನ್ ಮಾಡಲಾಗಿದೆ.