ಬೆಂಗಳೂರು:- ನಟಿ ಲೀಲಾವತಿ ಅವರ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪಡೆದರು. ಪುತ್ರ ವಿನೋದ್ ರಾಜ್ ಅವರಿಗೆ ಸಾಂತ್ವನ ಹೇಳಿದ್ದಾರೆ.
ಅಂತಿಮ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿ ಲೀಲಾವತಿ ಪಾರ್ಥಿವ ಶರೀರಕ್ಕೆ ನಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಲೀಲಾವತಿ ಅವರ ಬಗ್ಗೆ ಮಾತನಾಡಿದ್ದು, ಅವರು ಅಪ್ರತಿಮ ಕಲಾವಿದೆಯಾಗಿದ್ದರು. ನಾನು ಬಾಲ್ಯದಲ್ಲಿ ಲೀಲಾವತಿ ನಟನೆಯ ಸಾಕಷ್ಟು ಚಿತ್ರಗಳನ್ನು ನೋಡಿದ್ದೇನೆ. ಭಕ್ತಪ್ರಹ್ಲಾದ ಚಿತ್ರದಲ್ಲಿ ಅವರ ನಟನೆ ಮನೋಗ್ನವಾಗಿದೆ.
ಲೀಲಾವತಿ ತಮ್ಮನ್ನು ತಾವು ಸಮಾಕಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರು ಗಳಿಸಿದ ಹಣವನ್ನು ಕೇವಲ ತಮಗೆ ಮಾತ್ರ ಬಳಸದೆ, ಸಮಾಜಿಕ ಕಾರ್ಯವನ್ನೂ ಮಾಡಿದ್ದಾರೆ. ಆಸ್ಪತ್ರೆ ಕಟ್ಟಿಸಿದ್ದಾರೆ, ಸಾಕಷ್ಟು ಹೋರಾಟ ಮಾಡಿದ್ದಾರೆ. ಇತ್ತೀಚೆಗಷ್ಟೆ ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಅವರ ಅಗಲಿಕೆಯಿಂದ ತುಂಬಾ ದುಃಖವಾಗಿದೆ ಎಂದು ಹೇಳಿದ್ದಾರೆ.