ಬೆಂಗಳೂರು: ಬಿಜೆಪಿಗರು ಪರಪ್ಪನ ಅಗ್ರಹಾರಕ್ಕೆ ತೆರಳಲು ತಯಾರಾಗಿರಲಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಬಿಎಂಪಿಯಲ್ಲಿ ನಡೆದಿರುವ ಎಲ್ಲಾ ಅಕ್ರಮಗಳನ್ನು ತನಿಖೆ ನಡೆಸಿ ದಾಖಲೆ ಸಲ್ಲಿಸಲು ಡಿಸಿಎಂ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ.
ಬಿಜೆಪಿಗರು ಪರಪ್ಪನ ಅಗ್ರಹಾರಕ್ಕೆ ತೆರಳಲು ತಯಾರಾಗಿರಲಿ! ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಚುನಾವಣೆ ನಡೆಸಲಾಗದ ಬಿಜೆಪಿ ಸರ್ಕಾರದಿಂದಾಗಿ ಚುನಾಯಿತ ಜನಪ್ರತಿನಿಧಿಗಳಿಲ್ಲದ ಬಿಬಿಎಂಪಿಗೆ ಚುರುಕು ಮುಟ್ಟಿಸಲಾಗಿದೆ.
ಬಿಬಿಎಂಪಿಯಲ್ಲಿ ಜನಸ್ನೇಹಿ ಹಾಗೂ ಭ್ರಷ್ಟಾಚಾರ ಮುಕ್ತ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದುವರೆಗೂ ನಡೆದ ಎಲ್ಲಾ ಅಕ್ರಮಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.