ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ ತಿಂಗಳು ಕಳೆದಿದೆ. ಈಗಾಗಲೇ ಸಾಕಷ್ಟು ನಟ,ನಟಿಯರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ದರ್ಶನ್ ಭೇಟಿ ಮಾಡಿ ಬಂದಿದ್ದಾರೆ. ಇದೀಗ ೀ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದ್ದು, ಅಭಿಮಾನಿಗಳಿಗೆ ಸಂತೋಷವಾಗಿದೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ, ಇಂದು (ಜು.24) ಭೇಟಿಯಾಗಿ ಮಾತಾಡುವೆ ಎಂದು ಹೇಳಿದರು.
ಮಂಗಳವಾರ ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವ ನಡೆಯಿತು. ಮಹೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿ ಭಾಷಣದ ವೇಳೆ ನಟ ದರ್ಶನ ಅಭಿಮಾನಿಗಳು ಡಿ ಬಾಸ್, ಡಿ ಬಾಸ್ ಎಂದು ಕೂಗಲು ಆರಂಭಿಸಿದರು. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್, ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ, ಇಂದು (ಜು.24) ಭೇಟಿಯಾಗಿ ಮಾತಾಡುವೆ ಎಂದು ತಿಳಿಸಿದರು.
ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುವೆ. ಆದರೆ ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲಾ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದರು.
ಗೆಳತಿ ಪವಿತ್ರಾಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆಂದು ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಮೇಲೆ ನಟ ದರ್ಶನ ಎಂಡ್ ಗ್ಯಾಂಗ್ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿದೆ. ಘಟನೆಯಲ್ಲಿ ದರ್ಶನ್ ಪವಿತ್ರಾ ಗೌಡ ಸೇರಿದಂತೆ 17 ಜನರನ್ನು ಬಂಧಿಸಲಾಗಿದೆ. ಆಗಸ್ಟ್ 1ರವರೆಗೆ ದರ್ಶನ್ ರನ್ನು ನ್ಯಾಯಾಂಗ ಬಂಧನದಲ್ಲಿರಿಸಿ ಕೋರ್ಟ್ ಆದೇಶ ಹೊರಡಿಸಿದೆ.