ಹುಬ್ಬಳ್ಳಿ: ನಮ್ಮದು ಬಿಟ್ಟು ಸಿಎಮ್ ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ ಎಂದು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿ ದರು. ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವೆ.
ಭಾರತೀಯ ಜನತಾ ಪಕ್ಷದ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ ಬಫರ್ ಸ್ಟಾಕ್ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ. ಕೇಂದ್ರದ ಅಕ್ಕಿ ಬೇಕಿದ್ರೆ ನಮ್ಮನ್ನು ಕೇಳಿಯೇ ಘೋಷಣೆ ಮಾಡ್ಬೇಕು ಕೇಂದ್ರದಿಂದ ನಮಗೆ ಸಾಧ್ಯವಿರುವ ಎಲ್ಲಾ ಸಹಕಾರ ಕೊಡುತ್ತೇವೆ ಎಂದ ಅವರು, ಟೆಂಡರ್ ಕರೆದು ಕೇಂದ್ರ ಸರ್ಕಾರ ಅಕ್ಕಿ ಖರೀದಿ ಮಾಡುತ್ತೆ ನೀವೂ ಅಕ್ಕಿ ಖರೀದಿಸಿ ಜನರಿಗೆ ವಿತರಿಸಿ, ನಮ್ಮದೇನು ಅಭ್ಯಂತರವಿಲ್ಲ ಎಂದರು.