ಕೋಲಾರ: ಕರ್ನಾಟಕವನ್ನು( Karnataka) ನಂ.1 ರಾಜ್ಯವನ್ನಾಗಿ ಮಾಡುವುದು ನಮ್ಮ ಉದ್ದೇಶವಾಗಿದ್ದು, ಕಾಂಗ್ರೆಸ್-ಜೆಡಿಎಸ್’ನಿಂದ(Congress-JDS) ಅದು ಸಾಧ್ಯವಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi)ಭಾನುವಾರ ಹೇಳಿದ್ದಾರೆ. ಚಿನ್ನದ ನಾಡು ಕೋಲಾರಕ್ಕೆ ಭೇಟಿ ನೀಡಿರುವ ಅವರು, ಬಿಜೆಪಿ ಸಮಾವೇಶದಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.
ಚಿನ್ನದ ನಾಡು ಕೋಲಾರದಲ್ಲಿ ಜನರು ಸೇರಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್(Congress-JDS) ನಿದ್ದೆಗೆಡಿಸುತ್ತದೆ. ಅಭಿವೃದ್ಧಿಯ ಪ್ರಕ್ರಿಯೆಯಲ್ಲಿ ಈ ಎರಡೂ ಪಕ್ಷಗಳು ದೊಡ್ಡ ಅಡ್ಡಿಯುಂಟು ಮಾಡುತ್ತಿದ್ದು, ಸಾರ್ವಜನಿಕರು ಈ ಪಕ್ಷಗಳನ್ನು ಕ್ಲೀನ್ ಬೌಲ್ಡ್ ಮಾಡುತ್ತಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನ ಭ್ರಷ್ಟ ಸರಕಾರದಿಂದ ಕರ್ನಾಟಕದ ಜನತೆಯನ್ನು ರಕ್ಷಿಸಬೇಕು. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಹೇಳಿದರು.
ಈ ಚುನಾವಣೆ ಬಾರಿಯ ಚುನಾವಣೆ ಬರೀ ಶಾಸಕರ ಆಯ್ಕೆ, ಮುಖ್ಯಮಂತ್ರಿ ಮಾಡಲು ಚುನಾವಣೆಯಷ್ಟೇ ಅಲ್ಲ. ಮುಂದಿನ 25 ವರ್ಷಗಳ ಕಾಲ ಕರ್ನಾಟಕವನ್ನು ಅಭಿವೃದ್ಧಿ ರಾಜ್ಯ ಮಾಡುವುದಾಗಿದೆ. ಅಸ್ತಿರ ಸರ್ಕಾರವಿದ್ದರೇ ಲಾಭಕ್ಕಿಂತ ನಷ್ಟವೇ ಜಾಸ್ತಿ. ಅಸ್ತಿರ ಸರ್ಕಾರದಿಂದ ಭ್ರಷ್ಟಾಚಾರ ಹೆಚ್ಚಾಗುತ್ತದೆ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ಅಧಿಕಾರದಿಂದ ದೂರವಿಡೋಣ ಎಂದು ತಿಳಿಸಿದರು.