ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆಂದು ನೋಡೊಣ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನಕ್ಕೂ ಮೊದಲು ಲಿಂಗಾಯತ ಸಮುದಾಯದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಬಹಳ ಮಾತನಾಡಿದ್ದಾರೆ.
ಅವರು ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಯಾವ ಯಾವ ಹುದ್ದೆಗಳನ್ನು ಕೊಡುತ್ತಾರೆಂದು ಕಾದು ನೋಡೋಣ ಎಂದರು. ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರು ಮತ್ತು ರಾಜ್ಯದ ಅಭಿವೃದ್ಧಿ ಮಾಡಲಿ. ಪಕ್ಷದಲ್ಲಿ ಹೊಂದಾಣಿಕೆ ಸರಿ ಇಲ್ಲ ಎನ್ನುವುದನ್ನು ತೋರಿಸುತ್ತದೆ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ.ಸರ್ಕಾರ ರಚಿಸುವ ಮೂಲಕ ಜನರ ಸೇವೆ ಮಾಡಲಿ ಎಂದು ಬೊಮ್ಮಾಯಿ ಹೇಳಿದರು.