ಹುಬ್ಬಳ್ಳಿ: ಕರ್ನಾಟಕ ಮೊದಲಿದ್ದ ಉತ್ತರ ಪ್ರದೇಶ ಮಾದರಿಯಲ್ಲಿ ಗೂಂಡಾ ರಾಜ್ಯವಾಗುತ್ತಿದ್ದು, ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ಮೊದಲು ಗೂಂಡಾ ರಾಜ್ಯವಾಗಿತ್ತು. ಅಲ್ಲಿ ಯೋಗಿ ಆದಿತ್ಯನಾಥ ಸಿಎಂ ಆದ ನಂತರ ಶಾಂತಿ ನೆಲೆಸಿದೆ. ಅವರು ಯಾವುದೇ ಕಾನೂನು ಬದಲಾವಣೆ ಮಾಡದೇ ಇದ್ದ ಕಾನೂನಿನಲ್ಲಿಯೇ ಎಲ್ಲವನ್ನು ನಿಭಾಯಿಸಿ ಶಾಂತಿಯನ್ನು ನೆಲೆಸುವಂತೆ ಮಾಡಿದ್ದಾರೆ. ಅಂತಹ ದಿಟ್ಟ ನಿರ್ಧಾರವನ್ನು ರಾಜ್ಯದ ಮುಖ್ಯಮಂತ್ರಿಗಳು ಏಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಾಗ ಗೃಹ ಸಚಿವರು ಸಭೆ ನಡೆಸಿ ಅಧಿಕಾರಿಗಳ ಕಾರ್ಯವೈಖರಿಯ ಪರಿಶೀಲನೆ ಮಾಡಬೇಕಿತ್ತು. ಆದರೆ ಗೃಹ ಇಲಾಖೆ ಇವೆಲ್ಲವನ್ನೂ ನಿರ್ಲಕ್ಷ್ಯ ವಹಿಸಿದೆ. ಇತ್ತೀಚಿಗೆ ನೇಹಾ ಹಿರೇಮಠ ಕೊಲೆಯಾದಾಗ ರಾಜ್ಯ ತಲ್ಲಣಗೊಂಡಿತ್ತು. ಕಾಲೇಜು ಕ್ಯಾಂಪಸ್ನಲ್ಲಿ ಕೊಲೆಯಾಗಿದೆ.
ಕಾನೂನು ಸುವ್ಯವಸ್ಥೆ ಇಲ್ಲ ಅನ್ನೋ ಚರ್ಚೆ ನಡೆದಿತ್ತು. ಸರಕಾರ ಇದನ್ನು ಗಂಭಿರವಾಗಿ ತಗೆದುಕೊಳ್ಳಬೇಕಿತ್ತು. ಕೊಲೆ ಸುಲಿಗೆ ದರೋಡೆ ನಡೀತಿದೆ. ಇದನ್ನು ಸರಕಾರಕ್ಕೆ ಇದನ್ನು ಕಂಟ್ರೋಲ್ ಮಾಡೋಕೆ ಆಗುತ್ತಿಲ್ಲ. ನೇಹಾ ಹತ್ಯೆಯಾದಾಗ ಗೃಹಸಚಿವರು ಬೇಜಾವ್ದಾರಿಯಾಗಿ ಮಾತನಾಡಿದ್ದರು. ಆದರೆ ಈಗ ಅಂಜಲಿ ಮರ್ಡರ್ ಕೇಸ್ ಆಗಿದೆ ಎಂದರು.