ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನಲೆ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ, ಇದರಿಂದಾಗಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇದಿನೇ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿ,
ದ್ದು ಇಂದು ಬೆಳಗ್ಗೆ ವೇಳೆಗೆ ಜಲಾಶಯದ ನೀರಿನ ಮಟ್ಟ 1801.20 (65.30%) ಅಡಿಗಳಗೆ ತಲುಪಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 60,000.00 ಕ್ಯೂಸೆಕ್ಸ್ ಗಳಿಗಿಂತಲೂ ಅಧಿಕವಾಗಿದೆ.ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಿಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ.
ಆದ್ದರಿಂದ,ಲಿಂಗನಮಕ್ಕಿ ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.. ಆದ್ದರಿಂದ, ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ.