ವಿಶ್ವ ಕ್ರಿಕೆಟ್ನ ಸಾಮ್ರಾಟ ಕಿಂಗ್ ಕೊಹ್ಲಿಗೆ ಗೆಲುವಿನ ಉಡುಗೊರೆ ನೀಡಲು ಟೀಂ ಇಂಡಿಯಾ ಬಯಸುತ್ತಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಪೋರ್ಟ್ ಆಫ್ ಸ್ಪೇನ್ನಲ್ಲಿ ನಡೆಯಲಿದೆ.
ಇದಕ್ಕಾಗಿ ಟೀಂ ಇಂಡಿಯಾ ಟ್ರಿನಿಡಾಡ್ ತಲುಪಿದ್ದು, ವೆಸ್ಟ್ ಇಂಡೀಸ್ ಕೂಡ ತನ್ನ 13 ಸದಸ್ಯರ ತಂಡವನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 1-0 ಅಂತರದ ಮುನ್ನಡೆ ಸಾಧಿಸಿದೆ. ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದು, ಸರಣಿ ತನ್ನದಾಗಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದೆ. ಅಲ್ಲದೆ ಈ ಟೆಸ್ಟ್ ಪಂದ್ಯ ಉಭಯ ದೇಶಗಳ ನಡುವಿನ 100ನೇ ಟೆಸ್ಟ್ ಪಂದ್ಯವಾಗಿರುವುದರಿಂದ ಈ ಪಂದ್ಯವನ್ನು ಗೆಲ್ಲುವುದು ಉಭಯ ದೇಶಗಳ ಗುರಿಯಾಗಿದೆ. ಹಾಗೆಯೇ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಇದು 500ನೇ ಅಂತಾರಾಷ್ಟ್ರೀಯ ಪಂದ್ಯವಾಗಿರುವುದರಿಂದ ವಿಶ್ವ ಕ್ರಿಕೆಟ್ನ ಸಾಮ್ರಾಟ ಕಿಂಗ್ ಕೊಹ್ಲಿಗೆ ಗೆಲುವಿನ ಉಡುಗೊರೆ ನೀಡಲು ಟೀಂ ಇಂಡಿಯಾ ಬಯಸುತ್ತಿದೆ.
ಜುಲೈ 20 ರ ಗುರುವಾರದಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 2ನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟೆಸ್ಟ್ ಪಂದ್ಯವು ಸ್ಥಳೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗುತ್ತದೆ.
ದೂರದರ್ಶನ ನೆಟ್ವರ್ಕ್ನಲ್ಲಿ (ಡಿಡಿ ಸ್ಪೋರ್ಟ್ಸ್) ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.
ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ಉಚಿತವಾಗಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಹಾಗೆಯೇ ಫ್ಯಾನ್ಕೋಡ್ ಚಂದಾದಾರಿಕೆಯನ್ನು ಹೊಂದಿರುವ ಅಭಿಮಾನಿಗಳು ತಮ್ಮ ಮೀಸಲಾದ ಅಪ್ಲಿಕೇಶನ್ ಮತ್ತು ವೆಬ್ಸೈಟ್ ಮೂಲಕ ಈ ಪಂದ್ಯವನ್ನು ವೀಕ್ಷಿಸಬಹುದು.