ಜೂನ್ 26 ರಂದು ಲೋಕಸಭಾ ಸ್ಪೀಕರ್ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳನ್ನು ಬೆಂಬಲಿಸುವ ಪತ್ರವನ್ನು ಸದಸ್ಯರು ಒಂದು ದಿನ ಮುಂಚಿತವಾಗಿ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು ಎಂದು ಲೋಕಸಭೆಯ ಸೆಕ್ರೆಟರಿಯೇಟ್ ಗುರುವಾರ ತಿಳಿಸಿದೆ.
ಲೋಕಸಭೆ ಚುನಾವಣೆಯ ನಂತರ ಮೊದಲ ಸಂಸತ್ ಅಧಿವೇಶನ ಪ್ರಾರಂಭವಾಗಿ ಎರಡು ದಿನಗಳ ನಂತರ ಜೂನ್ 26 ರಂದು ಲೋಕಸಭಾ ಸ್ಪೀಕರ್ ಚುನಾವಣೆ ನಡೆಯಲಿದೆ.
ಚುನಾವಣೆಗೆ ನಿಗದಿಪಡಿಸಿದ ದಿನಾಂಕದ ಹಿಂದಿನ ದಿನದಂದು ಮಧ್ಯಾಹ್ನ 12 ಗಂಟೆಯ ಮೊದಲು ಯಾವುದೇ ಸಮಯದಲ್ಲಿ, ಯಾವುದೇ ಸದಸ್ಯರು ಸ್ಪೀಕರ್ ಕಚೇರಿಗೆ ಇನ್ನೊಬ್ಬ ಸದಸ್ಯರನ್ನು ಬೆಂಬಲಿಸುವ ಪ್ರಸ್ತಾವನೆಯನ್ನು ಸಲ್ಲಿಸಬಹುದು. ಜೂನ್ 25ರ ಮಂಗಳವಾರ ಮಧ್ಯಾಹ್ನ 12 ಗಂಟೆಯ ಮೊದಲು ಸ್ಪೀಕರ್ ಆಯ್ಕೆಗೆ ಸೂಚನೆಗಳನ್ನು ನೀಡಬಹುದು.
ನೂತನವಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲ ಎರಡು ದಿನ ಮೀಸಲಾಗಿದ್ದರೆ, ಜೂನ್ 26ಕ್ಕೆ ಸ್ಪೀಕರ್ ಆಯ್ಕೆಗೆ ದಿನಾಂಕ ನಿಗದಿ ಮಾಡಲಾಗಿದೆ. ಲೋಕಸಭೆ ಚುನಾವಣೆಯ ನಂತರ ಮೊದಲ ಸಂಸತ್ ಅಧಿವೇಶನ ಜೂನ್ 24 ರಿಂದ ಜುಲೈ 3 ರವರೆಗೆ ನಡೆಯಲಿದೆ.