ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 13 ಮಂದಿ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಇಂದು ಬೆಲ್ಳಂಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕೂ ಹೆಚ್ಚು ಆಸ್ತಿ ಸಂಪಾದನೆ ಆರೋಪ ಸಂಬಂಧ ಮಾಹಿತಿ ಪಡೆದ ಅಧಿಕಾರಿಗಳು 13 ಎಸ್ಪಿಗಳು, 12 ಡಿವೈಎಸ್ಪಿ, 25 ಪಿಐ ಹಾಗೂ 80 ಮಂದಿ ಸಿಬ್ಬಂದಿ ಒಳಗೊಂಡ ಒಟ್ಟು 130 ಮಂದಿ ರಾಜ್ಯದ 60 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ದಾಳಿಗೊಳಗಾದ ಅಧಿಕಾರಿಗಳ ವಿವರ
ರಂಗನಾಥ್ ಎಸ್.ಪಿ – ಬಿಬಿಎಂಪಿಯ ಯಲಹಂಕ ಹಾಗೂ ಬ್ಯಾಟರಾಯನಪುರ ವಿಭಾಗದ ಚೀಫ್ ಇಂಜಿನಿಯರ್ ಗೆ ಸಂಬಂಧಿಸಿದ ಬೆಂಗಳೂರಿನ 5 ಸ್ಥಳಗಳು
ರೂಪ – ಡೆಪ್ಯುಟಿ ಕಮಿಷನರ್, ಅಬಕಾರಿ ಇಲಾಖೆ – ಸಂಬಂಧಿತ ಉಡುಪಿಯ 5 ಸ್ಥಳಗಳು
ಪ್ರಕಾಶ್ – ಜ್ಯೂನಿಯರ್ ಇಂಜಿನಿಯರ್ – ಸಂಬಂಧಿಸಿದ ಕಾರವಾರ – ಉ.ಕ ಜಿಲ್ಲೆಯ 4 ಸ್ಥಳಗಳು
ಫಯಾಜ್ ಅಹಮದ್ – ಅಸಿಸ್ಟೆಂಟ್ ಇಂಜಿನಿಯರ್ – ಸಂಬಂಧಿಸಿದ ಮೈಸೂರಿನ 12 ಸ್ಥಳಗಳು
ಜಯಣ್ಣ ಬಿ.ವಿ. ಮುಖ್ಯ ಕಾರ್ಯಕಾರಿ ಅಭಿಯಂತರ, ಕೊಡಗು
ಮಹೇಶ್ ಚಂದ್ರಯ್ಯ ಹೀರೆಮಠ್- ಅರಣ್ಯ ವಲಯದ ಅಧಿಕಾರಿ- ಧಾರವಾಡದ 6 ಸ್ಥಳಗಳು
ಶಿವಕುಮಾರಸ್ವಾಮಿ- ಎಕ್ಸಿಕ್ಯೂಟಿವ್ ಇಂಜಿನಿಯರ್ ಬೀದರ್ ನ 4 ಸ್ಥಳಗಳು
ನಾಗರಾಜಪ್ಪ- ಅಸ್ಟಿಸೆಂಟ್ ಡೈರೆಕ್ಟರ್ ಕೋಲಾರದ ಐದು ಕಡೆಗಳಲ್ಲಿ
ಷಣ್ಮುಗಪ್ಪ, ಎಆರ್ ಟಿಓ ಜಮಖಂಡಿ, ಬಾಗಲಕೋಟೆಯ ನಾಲ್ಕು ಕಡೆಗಳಲ್ಲಿ
ಸದಾಶಿವಯ್ಯ, ಅಸ್ಟಿಸೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಿಕ್ಕಬಳ್ಳಾಪುರದ 6 ಕಡೆಗಳಲ್ಲಿ ದಾಳಿ