ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಒಟ್ಟು 11 ಪ್ರಕರಣಗಳಲ್ಲಿ 9 ಜಿಲ್ಲೆಗಳ 56 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ.
ಇನ್ನೂ ಅದರಂತೆ ಬೆಳಗಾವಿಯಲ್ಲಿ ಜಿಪಂ ಎಇಇ ಮೇಲೆ ಮಹಾದೇವ ಬನ್ನೂರ ಮನೆ ಮೇಲೆ ದಾಳಿಯಾಗಿದೆ. ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿರುವ ಬನ್ನೂರ ಮನೆಗೆ ದಿಢೀರ್ ದಾಳಿ ನಡೆಸಿ ಶೋಧಕಾರ್ಯ ನಡೆಸ್ತಿದ್ದಾರೆ. ಈ ಹಿಂದೆ ಮಹಾದೇವ ಬನ್ನೂರ ಮೇಲೆ ಲೋಕಾ ಅಧಿಕಾರಿಗಳು ದಾಳಿ ಮಾಡಿದ್ದರು. ಆಗ ಮನೆಯಲ್ಲಿ ಅಕ್ರಮವಾಗಿ ಇಟ್ಕೊಂಡಿದ್ದ 27 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದ ದಾಳಿಯಾಗಿದೆ.