ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯದ ಕಲ್ಯಾಣ ವಿಭಾಗದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಫಲಾನುಭವಿಗಳ ಹಣವನ್ನು ಅಕ್ರಮವಾಗಿ ಸೊಸೈಟಿಗಳಿಗೆ ವರ್ಗಾಯಿಸಿದ್ದ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಬಿಎಂಪಿ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ಮನೆ ಹಾಗೂ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ ನಿವಾಸ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುನೀಲ್ ವೈ ನಾಯಕ್ ನೇತೃತ್ವದಲ್ಲಿ ಎಂಟು ತಂಡಗಳು ಏಕಕಾಲಕ್ಕೆ ದಾಳಿ ನಡೆಸಲಾಗಿದೆ.