ತುಮಕೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು KIADB ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ದಾಳಿ ನಡೆಸಲಾಗಿದೆ.ತುಮಕೂರು ನಗರದ ಆರ್.ಟಿ. ನಗರದಲ್ಲಿರುವ KIADB ಅಧಿಕಾರಿ ನರಸಿಂಹಮೂರ್ತಿ ಮನೆ ಮನೆ ಮೇಲೆ ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ಡಿಎಸ್ ಪಿ ಗಳಾದ ಮಂಜುನಾಥ್ ಹಾಗೂ ಹರೀಶ್ ತಂಡದಿಂದ ರೇಡ್ ನಡೆದಿದ್ದು ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.