ಬೆಳಗಾವಿ: ಕರ್ನಾಟಕ ಸಾರ್ವತ್ರಿಕ ಚುನಾವಣೆಗೆ 10 ದಿನ ಉಳಿದಿದೆ.ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಗ್ರಾಮೀಣ (Belagavi Rural) ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Congress MLA Laxmi Hebbalkar), ತಮ್ಮ ಮೇಲೆ ಲೋಕಾಯುಕ್ತ (Lokayukta Raid), ಐಟಿ ದಾಳಿ (IT Raid) ನಡೆಯಲಿದೆ ಎಂಬ ವಿಷಯವನ್ನು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ (Congress And JDS Leaders) ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಲಿದ್ದ್ದಾರೆ ಎಂಬ ವಿಷಯವನ್ನು ಹೇಳಿದರು.
ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ (Karnataka Assembly Election 2023) ಇನ್ನೂ 10 ದಿನ ಉಳಿದಿದೆ. ರಾಜ್ಯದಲ್ಲಿ ಈ ಸಲ ಕಾಂಗ್ರೆಸ್ (Congress) ಪರವಾದ ವಾತಾವರಣ ಇದೆ. ರಾಜ್ಯದ ಮತದಾರರು ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜನ ಭರವಸೆ ಇಟ್ಟಿದ್ದಾರೆ. ಬಿಜೆಪಿ ಹತಾಶೆಯಿಂದ ವಾಮಮಾರ್ಗ ಹಿಡಿಯುವಂತ ಸುದ್ದಿ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.
ಅಭ್ಯರ್ಥಿಗಳು ಮತ್ತು ಅವರ ಸಂಬಂಧಿಕರ ಮೇಲೆ 50 ಜನರ ಮೇಲೆ ಲೋಕಾಯುಕ್ತ, ಐಟಿ ದಾಳಿ ಸಂಬಂಧ ಇದೆ. ಕಾರ್ಯಕರ್ತರು ಗೊಂದಲ ಸೃಷ್ಟಿಯಾಗುತ್ತದೆ. ಒಂದು, ಎರಡು ದಿನದಲ್ಲಿ ದಾಳಿಯ ಮೂನ್ಸುಚನೆ ಸಿಕ್ಕಿದೆ ಎಂದು ಸ್ಫೋಟಕ ವಿಷಯವನ್ನು ತಿಳಿಸಿದರು.