ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಶುಕ್ರವಾರ 14ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿದರು.
ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಘೋಷಣೆ ಮಾಡುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್ ಮಂಡಿಸಿದರು. ವಿಧಾನಸಭೆ ಚುನಾವಣೆ ವೇಳೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಬಜೆಟ್ನಲ್ಲಿ ದೊಡ್ಡ ಪಾಲನ್ನು ಮೀಸಲಿಟ್ಟಿದ್ದಾರೆ. ಇನ್ನು ಯಾವೆಲ್ಲ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಮೀಸಲಿದ್ದಾರೆ ಎನ್ನುವ ವಿವರ ಇಲ್ಲಿದೆ.
ಸಿದ್ದರಾಮಯ್ಯನವರ 14 ನೇ ಬಜೆಟ್ನಲ್ಲಿ ಯಾವ ಯಾವ ಇಲಾಖೆಗೆ ಎಷ್ಷೇಷ್ಟು ಅನುದಾನ ನೋಡುವುದಾದರೆ ‘ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ ಮೀಸಲು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ, ಇಂಧನ ಇಲಾಖೆ 22,000 ಕೋಟಿ, ನೀರಾವರಿ ಇಲಾಖೆ 19,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,000 ಕೋಟಿ, ಒಳಾಡಳಿತ & ಸಾರಿಗೆ ಇಲಾಖೆ 16,000 ಕೋಟಿ, ಕಂದಾಯ ಇಲಾಖೆ 16,000 ಕೋಟಿ, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,000 ಕೋಟಿ, ಸಮಾಜ ಕಲ್ಯಾಣ ಇಲಾಖೆ 11,000 ಕೋಟಿ ಮೀಸಲು, ಲೋಕೋಪಯೋಗಿ ಇಲಾಖೆ 10,000 ಕೋಟಿ, ಕೃಷಿ & ತೋಟಗಾರಿಕೆ ಇಲಾಖೆ 5,800 ಕೋಟಿ ಸೇರಿ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲಿಡಲಾಗಿದೆ.