ಬೆಂಗಳೂರು ;– ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಶಂಕಿತ ಉಗ್ರ ಜುನೈದ್ ಅಹ್ಮದ್ ಪತ್ತೆಗಾಗಿ ಕೇಂದ್ರ ಅಪರಾಧ ವಿಭಾಗ ಪೊಲೀಸರು, ರಾಷ್ಟ್ರೀಯ ತನಿಖಾ ದಳ ಜಂಟಿ ಕಾರ್ಯಾಚರಣೆಯಲ್ಲಿ ಲುಕ್ ಔಟ್ ನೋಟಿಸ್ ಹೊರಡಿಸಲು ಸಿದ್ಧತೆ ನಡೆಸಲಾಗಿದೆ.
ಈಗಾಗಲೇ ಜುನೈದ್ನ ಐವರು ಸಹಚರರನ್ನು ಬಂಧಿಸಲಾಗಿದೆ. ಆತ ಅರಬ್ ಅಥವಾ ಯುರೋಪ್ ರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಆತನ ಬಂಧನಕ್ಕೆ ಲುಕ್ಔಟ್ ನೋಟಿಸ್ ನೀಡಲು ಸಿದ್ಧತೆ ಆ ರಂಭಿಸಲಾಗಿದೆ.
ಲುಕ್ಔಟ್ ನೋಟಿಸ್ ಹೊರಡಿಸಿದ ಬಳಿಕ ದೇಶದ ಎಲ್ಲ ರೈಲು, ವಿಮಾನ, ಬಸ್ ನಿಲ್ದಾಣ ಹಾಗೂ ವಿದೇಶಿ ಪೊಲೀಸರಿಗೂ ಮಾಹಿತಿ ರವಾನೆಯಾಗಲಿದೆ.
ಒಂದು ವೇಳೆ ಆತ ಪತ್ತೆಯಾದರೆ ಸ್ಥಳೀಯ ಪೊಲೀಸರ ನೆರವು ಪಡೆದು ವಶಕ್ಕೆ ಪಡೆಯಲಾಗುತ್ತದೆ.