ಮಧ್ಯಪ್ರದೇಶ: ಮೂರು ದಿನಗಳ ಹಿಂದಷ್ಟೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾಮುಕನೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗುವ ಮೂಲಕ ಪೈಶಾಚಿಕತೆ ಮೆರೆದ ಘಟನೆ ವರದಿಯಾಗಿತ್ತು. ಇದೀಗ ಮಧ್ಯಪ್ರದೇಶದಲ್ಲೂ ಮಾನವ ಕುಲ ತಲೆತಗ್ಗಿಸುವ ಮತ್ತೊಂದು ಇಂಥವುದೇ ಘಟನೆ ನಡೆದಿದೆ.
ಮಧ್ಯಪ್ರದೇಶದ ರೇವಾ ಜಿಲ್ಲೆಯ ಮಲೈಗಾಂವ್ ಗ್ರಾಮದಲ್ಲಿ ರಾತ್ರಿ ಈ ಘಟನೆ ನಡೆದಿದ್ದು,
ಮನೆ ಹಿಂದಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಎರಡು ತಿಂಗಳ ಕರುವಿನ ಮೇಲೆ ಅತ್ಯಾಚಾರ ಎಸಗಲಾಗಿದೆ. ಆರೋಪಿ ಈ ಕೃತ್ಯ ಎಸಗುತ್ತಿದ್ದ ಸಂದರ್ಭದಲ್ಲಿ ಎಚ್ಚರಗೊಂಡ ಮನೆ ಮಾಲೀಕ ಹೊರ ಬಂದಿದ್ದು ಆರೋಪಿ ಪರಾರಿಯಾಗಿದ್ದಾನೆ. ಈ ಸಂಬಂಧ ಈಗ ವಿವಿಧ ಕಲಂ ಗಳ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.