ವಿಜಯಪುರ: ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬೊಮ್ಮಾಯಿ ಭ್ರಷ್ಟ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಲಿಂಗಾಯತ ವಿಚಾರವಾಗಿ(Lingayat Community) ಪ್ರಶ್ನೆ ಕೇಳಿದ್ದಕ್ಕೆ ಅವರು ಉತ್ತರಿಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್( MB Patil )ಸ್ಪಷ್ಟನೆ ನೀಡಿದ್ದಾರೆ. ನಿಜಲಿಂಗಪ್ಪ, ಬಿ.ಡಿ.ಜತ್ತಿ, ವೀರೇಂದ್ರ ಪಾಟೀಲ್ ಶ್ರೇಷ್ಠ ನಾಯಕರು. ಲಿಂಗಾಯತರ ಬಗ್ಗೆ ಗೌರವವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲದೆ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರು ಹೇಳಿಕೆಗಳನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯಪುರ ನಗರದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವರುಣಾದಲ್ಲಿ (Varuna) ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ, ಈಗಾಗ್ಲೆ ಲಿಂಗಾಯತ ಚೀಫ್ ಮಿನಿಸ್ಟರ್ ಇದ್ದಾರಲ್ಲಾ ಅವ್ರೇ, ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು ಎಂದು ಹೇಳಿಕೆ ನೀಡಿದ್ದರು. ತಾವು ಮಾತನಾಡಿದ್ದಂತಹ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತೆ ಎಂಬುದನ್ನು ಅರಿತ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಲಿಂಗಾಯತರೆಲ್ಲ (Lingayat Community) ಭ್ರಷ್ಟರೆಂದು ನಾನು ಹೇಳಿದ್ದೇನೆಂದು ತೋರಿಸಲು ಮಾಡುತ್ತಿರುವ ಪ್ರಯತ್ನ ರಾಜಕೀಯ ದುರುದ್ದೇಶದಿಂದ ಕೂಡಿದ್ದು. ಆ ರೀತಿ ನಾನು ಹೇಳಿಯೇ ಇಲ್ಲ ಎಂದಿದ್ದಾರೆ.