ಬೆಂಗಳೂರು ;- ರಾಜಧಾನಿ ಬೆಂಗಳೂರಿನಲ್ಲಿ 2008ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಅಬ್ದುಲ್ ನಾಸೀರ್ ಮದನಿ ಪೊಲೀಸ್ ಬಂದೋಬಸ್ತ್ನೊಂದಿಗೆ ಕೇರಳಾಗೆ ತೆರಳಿದ್ದಾನೆ.
ತಂದೆಯ ಅನಾರೋಗ್ಯ ನಿಮಿತ್ತ ಸೋಮವಾರ ಸಂಜೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೊಚ್ಚಿನ್ಗೆ ಪೊಲೀಸ್ ಬಂದೋಬಸ್ತ್ನೊಂದಿಗೆ ಪ್ರಯಾಣಿಸಿದ್ದಾನೆ.
ಸುಪ್ರೀಂಕೋರ್ಟ್ನಿಂದ ಅನುಮತಿ ಪಡೆದು ಮದನಿ 12 ಕಾಲ ಕೇರಳದಲ್ಲಿ ವಾಸ್ತವ್ಯ ಹೂಡಲಿದ್ದು, ಜುಲೈ 7ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾನೆ. ತಂದೆಯ ಅನಾರೋಗ್ಯ ಹಿನ್ನೆಲೆಯಲ್ಲಿ ಕೇರಳಕ್ಕೆ ತೆರಳಲು ಅನುಮತಿ ಕೋರಿ ಸುಪ್ರೀಂಕೋರ್ಟ್ಗೆ ಮದನಿ ಅರ್ಜಿ ಸಲ್ಲಿಸಿದ್ದ. ಈ ಸಂಬಂಧ ಮದನಿ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯವು ಕೇರಳಕ್ಕೆ ತೆರಳಲು ಅನುಮತಿ ನೀಡಿತ್ತು. ಹೀಗಾಗಿ ಪೊಲೀಸ್ ಬಂದೋಬಸ್ತ್ ನಡುವೆ ಕಳುಹಿಸಲಾಗಿದೆ