ಮಡಿಕೇರಿ:- ಖಾಲಿ ಮನೆಯಲ್ಲಿ ದಂಪತಿ ನೇಣಿಗೆ ಶರಣಾಗಿದ್ದು, ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ.
ಪಿರಿಯಾಪಟ್ಟಣ ತಾಲೂಕಿನಲ್ಲಿ ಘಟನೆ ಜರುಗಿದೆ. ಸುರೇಶ್ ಹಾಗೂ ಅವರ ಪತ್ನಿ ಪಲ್ಲವಿ ಮೃತ ದಂಪತಿ ಎಂದು ಗುರುತಿಸಲಾಗಿದೆ.
ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ.
ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸುರೇಶ್ ಅವರು ಡೆತ್ನೋಟ್ ಬರೆದಿದ್ದು ಸಾವಿಗೆ ಕೆಲವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ