ಬೆಂಗಳೂರು: ರಾಜ್ಯದಲ್ಲಿ ಹಚ್ಚುತ್ತಿರು ಮದ್ರಾಸ್ ಐ ಹಿನ್ನಲೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹಾಗೂ ಸಲಹೆ ನೀಡಿದೆ.ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟುಮಾಡುತ್ತದೆ.
ಈ ಬಾರಿ ರಾಜ್ಯದಲ್ಲಿ ಮಳೆಗಾಲಕ್ಕೂ ಮುನ್ನವೇ ʻಮದ್ರಾಸ್ ಐʼ ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.
ಮದ್ರಾಸ್ ಐ ನಾ ರೋಗ ಲಕ್ಷಣಗಳು
- ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
- ಅತಿಯಾದ ಕಣ್ಣೀರು
- ಕಣ್ಣಿನಲ್ಲಿ ತುರಿಕೆ
- ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
- ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
- ದೃಷ್ಟಿ ಮಂಜಾಗುವುದು
- ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು
![Demo](https://prajatvkannada.com/wp-content/uploads/2023/08/new-Aston-Band.jpeg)