ಹುಬ್ಬಳ್ಳಿ: ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ಹುಬ್ಬಳ್ಳಿಯಲ್ಲಿರುವ ಗ್ರಾಹಕರಿಗಾಗಿ ಮೂರು ದಿನಗಳ ವಿಶೇಷ ಆಭರಣಗಳ ಪ್ರದರ್ಶನ ಮತ್ತು ಮಾರಾಟವನ್ನು ಸೆ 13 ರಿಂದ 16 ರವರೆಗೆ ಹುಬ್ಬಳ್ಳಿಯ ಫೆರ್ನ್ ರೆಸಿಡೆನ್ಸಿಯಲ್ಲಿ ನಡೆಯಲಿದೆ. ಶುದ್ಧ ಚಿನ್ನ ಮತ್ತು ರತ್ನಗಳು ಹಾಗೂ ಅತ್ಯುತ್ತಮವಾದ ಕರಕುಶಲತೆಯೊಂದಿಗೆ ಸಾಂಪ್ರದಾಯಿಕ ಮತ್ತು ಸಮಕಾಲೀನ ಸೃಷ್ಟಿಗಳ ಸಂಗ್ರಹವನ್ನು ವಿಶಿಷ್ಠ ಶ್ರೇಣಿಯೊಂದಿಗೆ ಪ್ರದರ್ಶಿಸಲಿದೆ.
ಪ್ರದರ್ಶನವನ್ನು ಹುಬ್ಬಳ್ಳಿಯ ಮಹಾಪೌರ ರಾಮಣ್ಣ ಬಡಿಗೇರ ಶಿಲ್ಪಾ ಶೆಟ್ಟರ್ ಉದ್ಘಾಟಿಸಿದರು. ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ನ ಮಾಜಿ ಅಧ್ಯಕ್ಷರು ಮತ್ತು ಧಾರವಾಡದ ಸುವರ್ಣ ಶೈಕ್ಷಣಿಕ ಟ್ರಸ್ಟ್ನ ಸಂಸ್ಥಾಪಕಾರದ ಸವಿತ ವಿ.ಅಮರಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ನ ಆಭರಣ ಸಂಗ್ರಹಗಳು ವೈಡೂರ್ಯ, ಸಿಟ್ರಿನ್, ಮುತ್ತುಗಳು, ನೀಲ, ಮಾಣಿಕ್ಯಗಳಂತಹ ಅಪರೂಪದ ವಜ್ರಗಳ ಸೂಕ್ಷ್ಮ ವಿನ್ಯಾಸಗಳೊಂದಿಗೆ ಸೊಬಗು ಮತ್ತು ಕ್ಲಾಸಿಕ್ ಶೈಲಿಯ ಸಮ್ಮಿಲನವಾಗಿವೆ. ನಿಮ್ಮ ವ್ಯಕ್ತಿತ್ವದತ್ತ ಗಮನ ಸೆಳೆಯಲು ಮತ್ತು ಅಬ್ಬರದ ಚಿಕ್ ಆಭರಣಗಳೊಂದಿಗೆ ನಿಮ್ಮ ವಸ್ತ್ರವಿನ್ಯಾಸಕ್ಕೆ ಸರಿಹೊಂದುವಂತೆ ವಿನ್ಯಾಸಗೊಳಿಸಲಾಗಿದೆ. ಸಿಕೆಸಿಯಿಂದ crash.club ಲ್ಯಾಬ್ ಗ್ರೋನ್ ಡೈಮಂಡ್ಸ್ ಅನ್ನು ಪರಿಚಯಿಸಲಾಗುತ್ತಿದೆ.