ಮಹದೇವಪುರ: ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಮಾಜಿ ಸಚಿವ ಅರವಿಂದ ಲಿಂಬಾವಳಿಯರವ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿಯವರಿಗೆ ಹೂಡಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಭಿನಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮಹದೇವಪುರ ಐಟಿಬಿಟಿ ಕ್ಷೇತ್ರ ತೀವ್ರ ಜಿದ್ದಾಜಿದ್ದಿಯ ಕಣವಾಗಿ ಕೂಡಿತ್ತು. ಕಾಂಗ್ರೆಸ್ ಅಭ್ಯರ್ಥಿ ಎಚ್ ನಾಗೇಶ್ ಅವರ ವಿರುದ್ದ 44,501 ಬಹುಮತದಿಂದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿಯವರು ಭರ್ಜರಿ ವಿಜಯ ಸಾಧಿಸಿದರು.
ನೂತನ ಶಾಸಕರನ್ನ ಹೂಡಿ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತು ಮಾಜಿ ಸಚಿವ ಅರವಿಂದ ಲಿಂಬಾವಳಿಯವರ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಸೇರಿ ಸನ್ಮಾನಿಸಲಾಯಿತು. ನಂತರ ಮಾತನಾಡಿದ ನೂತನ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿಯವರು, ತಮ್ಮ ಗೆಲುವಿಗೆ ಕಾರಣರಾದ ಬಿಜೆಪಿ ನಾಯಕರು ಮತ್ತು ಕ್ಷೇತ್ರದ ಎಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದರು. ನಮ್ಮ ಪತಿಯವರ ಹಾದಿಯಲ್ಲೆ ನಾನು ನಡೆದು ಕ್ಷೇತ್ರದ ಅಭಿವೃದ್ಧಿ ಮಾಡಲು ಶ್ರಮಿಸುವುದಾಗಿ ತಿಳಿಸಿದರು. ಕಳೆದ ಹದಿನೈದು ವರ್ಷದಲ್ಲಿ ಮಹದೇವಪುರ ಕ್ಷೇತ್ರ ಸಾಕಷ್ಟು ಬದಲಾವಣೆ ಆಗಿದ್ದು
ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನಗಳನ್ನ ತಂದು ಕ್ಷೇತ್ರದ ,ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ,ನಗರ ಮಂಡಲ ಅಧ್ಯಕ್ಷ ಮನೋಹರ್ ರೆಡ್ಡಿ, ಗ್ರಾಮಾಂತರ ಮಂಡಲ ಅಧ್ಯಕ್ಷ ನಟರಾಜ್, ಬಿದರಹಳ್ಳಿ ಗ್ರಾ.ಪಂ.ಅಧ್ಯಕ್ಷ ಬಿದರಹಳ್ಳಿ ರಾಜೇಶ್, ಕಿತ್ತಗನೂರು ಗ್ರಾ.ಪಂ.ಉಪಾಧ್ಯಕ್ಷ ಕೆವಿ ನಾಗರಾಜ್, ಹೂಡಿ ಪಿಳ್ಳಪ್ಪ, ಬೇಳೆ ಶಿವಾಲಯ ಯುವ ಮುಖಂಡ ಆನಂದ್,ಮುಖಂಡರಾದ ರಾಜಾರೆಡ್ಡಿ, ಅನಂತರಾಮಯ್ಯ,ಹೂಡಿ ಮಂಜುನಾಥ್, ಮತ್ತಿತರರು ಇದ್ದರು.