ಬೆಂಗಳೂರು: 292 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಈ ಸಂಬಂಧ ಆದೇಶ ಹೊರಡಿಸಲಾಗಿದೆ 292 ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಸರ್ಕಾರವು ಮೇಜರ್ ಸರ್ಜರಿ ಮಾಡಿದೆ.
ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ಹಿಂತಿರುಗಿಸಿ ಸರಕಾರ ಆದೇಶಿಸಿದ್ದು, ವರ್ಗಾವಣೆಗೊಂಡಿರುವ ಪೊಲೀಸ್ ಅಧಿಕಾರಿಗಳು ತಕ್ಷಣ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದಿಂದ ಸೂಚಿಸಲಾಗಿದೆ.