ಮೊಹಾಲಿ: 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸೊಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಮ್ಯಾಚ್ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡ ಮುಖಾಮುಖಿ ಆಗಲಿದೆ.
ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ವೇಯ್ನ್ ಪಾರ್ನೆಲ್ ಬದಲು ಜೋಶ್ ಹ್ಯಾಝಲ್ವುಡ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
ಮೊಹಮ್ಮದ್ ಸಿರಾಜ್ ಬಿಟ್ಟರೆ ಮತ್ಯಾವ ಬೌಲರ್ ಕೂಡ ಮಾರಕವಾಗಿ ಗೋಚರಿಸುತ್ತಿಲ್ಲ. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಇಂದು ಬದಲಾವಣೆ ಖಚಿತ ಎಂದು ಹೇಳಬಹುದು. ಇದೀಗ ಈ ಹೈವೋಲ್ಟೇಜ್ ಪಂದ್ಯಕ್ಕಾಗಿ RCB ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ, ನಾಯಕ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್ ಬ್ಯಾಟಿಂಗ್ ಅಭ್ಯಾಸ ನಡೆಸಿದರು.
ಮಹಿಪಾಲ್ ಲುಮ್ರೂರ್, ದಿನೇಶ್ ಕಾರ್ತಿಕ್, ಶಹ್ಬಾಜ್ ಅಹ್ಮಾದ್ ಕಡೆಯಿಂದ ಉತ್ತಮ ಆಟಬರಬೇಕಿದೆ. ಪಾಯಿಂಟ್ ಟೇಬಲ್ನಲ್ಲಿ ಮೇಲಕ್ಕೇರಲು ಇಂದಿನ ಪಂದ್ಯದಲ್ಲಿ ಆರ್ಸಿಬಿ ಗೆಲ್ಲಲೇ ಬೇಕಾಗಿದೆ. ಈ ಬಾರಿ ಆರ್ಸಿಬಿ ಆಡಿರುವ 5 ಪಂದ್ಯಗಳಲ್ಲಿ ಆರ್ಸಿಬಿ ಮೂರರಲ್ಲಿ ಸೋತಿದೆ. ಇದೀಗ ಮೊದಲಾರ್ಧಕ್ಕೂ ಮುನ್ನ ಸತತ ಗೆಲುವು ಸಾಧಿಸುವ ಹಂಬಲದಲ್ಲಿದೆ RCB.
RCB ತಂಡವು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಒಟ್ಟು 7 ಪಂದ್ಯಗಳನ್ನಾಡಿದೆ. ಈ ವೇಳೆ ಆರ್ಸಿಬಿ ಗೆದ್ದಿರುವುದು ಕೇವಲ 4 ಬಾರಿ ಮಾತ್ರ. ಇನ್ನು ಕಳೆದ ಸೀಸನ್ನಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಎರಡು ಬಾರಿ ಕೂಡ ಸೋಲನುಭವಿಸಿತ್ತು.