ಕೆ.ಆರ್.ಪುರಂ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಪ್ರತಿಷ್ಠಿತ ಹೋಟೆಲ್ಗಳಲ್ಲಿ ಹಣ ಕದಿಯುತ್ತಿದ್ದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಆರ್ಥಿಕ ಸಂಕಷ್ಟದ ನೆಪವೊಡ್ಡಿ ಸಿಂಪತಿ ಗಿಟ್ಟಿಸಿ ಹೋಟೆಲ್ನಲ್ಲಿ ಕೆಲಸ ಪಡೆಯುತ್ತಿದ್ದ. ಬಳಿಕ ಹೋಟೆಲ್ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಲೇ ಹೊಂಚುಹಾಕಿ ಹಣ ಎಗರಿಸ್ತಿದ್ದ.
ರವಿಕುಮಾರ್ ಬಂಧಿತ ಆರೋಪಿ, ಕಳೆದ ವರ್ಷ ಫೆ.19ರಂದು ಕೆ.ಆರ್.ಪುರದ ಭಟ್ಟರಹಳ್ಳಿಯ ಹೋಟೆಲ್ನಲ್ಲಿ ಹಣ ಕಳವು ಮಾಡಿದ್ದ. ಹೋಟೆಲ್ನ ಕ್ಯಾಷ್ಕೌಂಟರ್ನಲ್ಲಿದ್ದ 1 ಲಕ್ಷ ಹಣ ಕದ್ದಿದ್ದ. ಸತೀಶ್ ಶೆಟ್ಟಿ ಎಂಬುವರ ಹೋಟೆಲ್ನಲ್ಲಿ ಹಣ ಕದ್ದು ಪರಾರಿಯಾಗಿದ್ದ. ಇದಾದ ಬಳಿಕ ಇತ್ತೀಚೆಗೆ ದೇವನಹಳ್ಳಿ ಬಳಿ ಹೋಟೆಲ್ನಲ್ಲಿ ಕೆಲಸ ಮಾಡುವಾಗ ಸಿಕ್ಕಿಬಿದ್ದಿದ್ದಾನೆ. ಹಣ ಕಳೆದುಕೊಂಡಿದ್ದ ಮಾಲೀಕ ಸತೀಶ್ ಶೆಟ್ಟಿಯಿಂದಲೇ ಆರೋಪಿ ಲಾಕ್ ಆಗಿದ್ದಾನೆ. ಸತೀಶ್ ಶೆಟ್ಟಿ ಅವರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರತಿಷ್ಠಿತ ಹೋಟೆಲ್ ಗುರಿಯಾಗಿಸಿಕೊಂಡು ಹಣ ಎಗರಿಸುತ್ತಿದ್ದ ಆರೋಪಿ ಅರೆಸ್ಟ್ ಆಗಿದ್ದಾನೆ.
ಇನ್ನು ಆರೋಪಿ ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಕ್ಯಾಷ್ ಕೌಂಟರ್ನಲ್ಲಿ ಕುಳಿತೇ ಹಣವನ್ನು ಪ್ಯಾಂಟ್ ಜೇಬಿಗಿಳಿಸಿ ಅಲ್ಲಿಂದ ಕಾಲ್ಕಿತ್ತ ಆರೋಪಿಯ ಕೈಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.