ಅಮೆರಿಕನ್ ಏರ್ ಲೈನ್ಸ್ ನಲ್ಲಿ ನ್ಯೂಯಾರ್ಕ್ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಮದ್ಯಪಾನ ಮಾಡಿದ್ದು ಈ ವೇಳೆ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ರಾತ್ರಿ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ನಂತರ ಮೂತ್ರ ವಿಸರ್ಜಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಮಾನಯಾನ ಸಂಸ್ಥೆಯಿಂದ ವರದಿ ಬಂದ ನಂತರ ವಿಮಾನಯಾನ ನಿಗಾ ಸಂಸ್ಥೆ ಸೂಕ್ತ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ತನ್ನ ಆಂತರಿಕ ಕಾರ್ಯವಿಧಾನದ ಪ್ರಕಾರ ವಿಷಯವನ್ನು ಮತ್ತಷ್ಟು ತನಿಖೆ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
ಅಮೆರಿಕನ್ ಏರ್ಲೈನ್ಸ್ ವಿಮಾನವು ರಾತ್ರಿ 9 ಗಂಟೆಯ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣವನ್ನು ತಲುಪಿತು, ಆದರೆ ಇಳಿಯುವ ಮೊದಲು ವಿಮಾನ ನಿಲ್ದಾಣಕ್ಕೆ ವಿಷಯವನ್ನು ತಿಳಿಸಲಾಗಿತ್ತು. ಸಂತ್ರಸ್ತ ಪ್ರಯಾಣಿಕರು ವಿಮಾನಯಾನ ಸಂಸ್ಥೆಗೆ ಔಪಚಾರಿಕ ದೂರು ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿಯಲ್ಲಿ ಉಲ್ಲೇಖಿಸಿದೆ ಮಾಡಿದೆ.