ಅಧ್ಯಾಪನ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ ) ಮಂಡ್ಯ ರವರು ಮಂಡ್ಯ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಬೆಂಗಳೂರು ಹಾಗೂ ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಸೇಷನ್ (ISRO) ಬೆಂಗಳೂರು* ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ತರಂಗ ಸ್ಪರ್ಧೆಯನ್ನು ಆಗಸ್ಟ್ 30 ರಂದು ಎ ಅಂಡ್ ಎ ಕನ್ವೆನ್ಷನ್ ಹಾಲ್ ನಲ್ಲಿ ಆಯೋಜಿಸಲಾಗಿದೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಂದಿನ ದಿನದಲ್ಲಿ ಮಕ್ಕಳಿಗೆ ಅತ್ಯವಶ್ಯಕವಾಗಿದ್ದು, ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಲು ಸ್ಪರ್ಧ ಕಾರ್ಯಕ್ರಮ ಆಯೋಜಿಸಿರುವುದು ಸಂತೋಷದ ವಿಷಯವಾಗಿದೆ. ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ; ಕುಮಾರ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ
ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಸೇಷನ್ (ISRO) ಸಂಸ್ಥೆಯು ಸ್ಪೇಸ್ ಆನ್ ವಿಲ್ ( ಡಿಪ್ಲಾಯ್ಕೆಂಟ್ ಬಸ್ ) ಪ್ರದರ್ಶಿಸಲಿದ್ದಾರೆ. ಇದರ ಜೊತೆಗೆ ವಿಜ್ಞಾನೋತ್ಸವದಲ್ಲಿ ಭಾಗಿಯಾಗುವ 250 ರಿಂದ 300 ಜನ ಮಕ್ಕಳಿಗೆ ಇಸ್ರೋ ಮ್ಯೂಸಿಯಂ ವೀಕ್ಷಣೆಗೆ ಅವಕಾಶ ಕಲ್ಪಿಸಿ ಕೊಟ್ಟಿರುತ್ತಾರೆ. ವೀಕ್ಷಣೆಗೆ ಹೋಗುವ ಮಕ್ಕಳ ಖರ್ಚು ವೆಚ್ಚಗಳನ್ನು ಅಧ್ಯಾಪನ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಬರಿಸಲಿದೆ.
ದೇಶದ ಹೆಸರಾಂತ ವಿಜ್ಞಾನ ಅನ್ವೇಷಣೆಯ ಸಂಸ್ಥೆಯ ಸಮಕ್ಷಮದಲ್ಲಿ ನಮ್ಮ ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳಿಗೆ ತಮ್ಮ ಕೌಶಲ್ಯ ಪ್ರದರ್ಶಿಸಲು ಸುವರ್ಣ ಅವಕಾಶ ಕಲ್ಪಿಸಿಕೊಟ್ಟಿದ್ದು ಪುತಿ ತರಗತಿಯಿಂದ ಇಬ್ಬರು ಮಕ್ಕಳು ಭಾಗವಹಿಸಬಹುದಾಗಿದೆ ಸುಮಾರು ಒಂದುವರೆ ಸಾವಿರ ಮಕ್ಕಳು ಭಾಗವಹಿಸುವ ನಿರೀಕ್ಷೆ ಇದೆ.
5ನೇ ತರಗತಿಯಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಯಲಿದೆ, ಪ್ರತಿ ತರಗತಿಗೂ ಮೂರು ಬಹುಮಾನಗಳು ಒಟ್ಟು 18 ಬಹುಮಾನಗಳು, ಆಕರ್ಷಕ ಉಡುಗೊರೆ, ಮೂಮೆಂಟೊ ಮತ್ತು ಪ್ರಮಾಣ ಪತ್ರ, ಸ್ಪರ್ಧೆಯಲ್ಲಿ ಭಾಗವಹಿಸಿ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರ ನೀಡಲಾಗುವುದು.