ಮಂಡ್ಯ:- ಹೆಚ್ಡಿ ಕುಮಾರಸ್ವಾಮಿ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದು, ಸರ್ಕಾರ ಹೆಚ್ಡಿ ಕುಮಾರಸ್ವಾಮಿ ರಾಜ್ಯ ಪ್ರವಾಸಕ್ಕೆ ಸರ್ಕಾರ ಕಾರು ನೀಡದೆ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿಬಂದಿದೆ.
ಇದರಿಂದ ಅಸಮಾಧಾನಗೊಂಡಿರುವ ಹೆಚ್ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರದ ನಡೆ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇದೀಗ, ಹೆಚ್ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಾಹನದಲ್ಲೇ ಮಂಡ್ಯ, ಮೈಸೂರು ಜಿಲ್ಲೆ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ನಡೆಗೆ ಮಂಡ್ಯದ ಕೆ.ಆರ್.ಪೇಟೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ನನಗೆ ಇಲ್ಲಿವರೆಗೂ ಕಾರು ಕೊಟ್ಟಿಲ್ಲ. ಹೀಗಾಗಿ, ನಮ್ಮ ಕೇಂದ್ರ ಸರ್ಕಾರದ ವಾಹನ ಬಳಕೆ ಮಾಡುತ್ತಿದ್ದೇನೆ. ಬೃಹತ್ ಕೈಗಾರಿಕಾ ಇಲಾಖೆಯ ವಾಹನ ತರಿಸಿಕೊಂಡಿದ್ದೇನೆ” ಎಂದು ಹೆಚ್ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಹೆಚ್ ಡಿ ಕುಮಾರಸ್ವಾಮಿಯವರನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು “ಆ ಬಗ್ಗೆ ನನಗೆ ಏನು ಗೊತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಬೇಕು” ಎಂದರು.