ಬೆಂಗಳೂರು: ಇಂದಿನಿಂದ ಜೂನ್ 11 ರವರೆಗೆ 9 ದಿನಗಳ ಕಾಲ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಮಾವು ಮೇಳ ನಡೆಯಲಿದೆ. ಪ್ರತಿ ವರ್ಷ ನೂರಕ್ಕೂ ಹೆಚ್ಚು ಮಳೆಗೆಗಳು ಮೇಳದಲ್ಲಿ ಭಾಗಿಯಾಗುತ್ತಿದ್ದವು, ಆದರೆ ಈ ವರ್ಷ ಮಳೆಯಿಂದ ಇಳುವರಿ ಕಡಿಮೆಯಾಗಿದ್ದು,ಈ ಬಾರಿ ಸುಮಾರು 40 ಮಳಿಗೆಗಳು ಮೇಳದಲ್ಲಿ ಭಾಗಿ ಭಾಗಿಯಾಗಲಿವೆ
ಕರ್ನಾಟಕ ತೋಟಗಾರಿಕಾ ಇಲಾಖೆಯಿಂದ ಮಾವು ಮೇಳ ಆಯೋಜನೆ ಮಾಡಲಾಗಿದ್ದು, ಎಲ್ಲಾ ಗ್ರಾಹಕರಿಗೆ ಉಚಿತ ಪ್ರವೇಶ ನೀಡಲಾಗಿದೆ. ಮೇಳದಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದ ಬೆಳೆಗಾರರು ಮಳಿಗೆಗಳನ್ನು ತೆರೆಯಲಿದ್ದು ಮಾವು ಮಾರಾಟ ಮಾಡಲಿದ್ದಾರೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಿಂದ ಬರುವ ಮಾವು ಬೆಳೆಗಾರರು ಇಲ್ಲಿ ಮಳಿಗೆಗಳನ್ನು ತೆರೆಯುತ್ತಾರೆ. ವಿವಿಧ ತಳಿಗಳ ಹಣ್ಣುಗಳು ಮಾವು ಪ್ರಿಯರನ್ನು ಸೆಳೆಯುತ್ತವೆ. ಮಲ್ಲಿಕಾ, ಮಾಲ್ಗೋವಾ, ಸೆಂಧೂರ, ಸಕ್ಕರೆಗುತ್ತಿ ಮತ್ತು ವಿವಿಧ ತಳಿಗಳ ಮಾವಿನ ಹಣ್ಣುಗಳನ್ನು ಮಾವು ಮೇಳದಲ್ಲಿ ಮಾರಾಟ ಮಾಡಲಾಗುತ್ತದೆ.