ಮಹದೇವಪುರ: ಮಹದೇವಪುರ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ವಿವಿಧ ಯೋಜನೆಗಳಡಿ 114 ಹೆಚ್ಚುವರಿ ಕೊಠಡಿಗಳನ್ನು ಶಾಸಕರಾದ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಮಹದೇವಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಅವರು ತಿಳಿಸಿದರು. ಮಹದೇವಪುರ ಕ್ಷೇತ್ರದ ಮಾರತ್ತಹಳ್ಳಿ,ಅಶ್ವಥ್ ನಗರ,ಎಇಸಿಎಸ್ ಬಡಾವಣೆ, ಕುಂದಲಹಳ್ಳಿ ಕಾಲೋನಿ, ಲಕ್ಷ್ಮೀನಾರಾಯಣಪುರ, ಚಿನ್ನಪ್ಪನಹಳ್ಳಿ,ದೊಡ್ಡನೆಕ್ಕುಂದಿ ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಿದರು.ಜೊತೆಗೆ ಅಂಗಡಿ ಮುಗ್ಗಟ್ಟು, ಹೋಟೆಲ್, ಬಸ್ ನಿಲ್ದಾಣ ಗಳಲ್ಲಿದ್ದ ಸಾರ್ವಜನಿಕರಿಗೆ ಕರ ಪತ್ರಗಳನ್ನ ನೀಡಿ ತಮ್ಮನ್ನ ಬೆಂಬಲಿಸುವಂತೆ ಮನವಿ ಮಾಡಿದರು.
ನಂತರ ಮಾತನಾಡಿದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ, ಶಿಕ್ಷಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ,ಕಂಪ್ಯೂಟರ್ ಹಾಗೂ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ವಿವರಿಸಿದರು. ಬಡ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ನಮ್ಮ ಕ್ಷೇತ್ರದಲ್ಲೆ ಎರಡು ಪ್ರಥಮ ದರ್ಜೆ ಕಾಲೇಜುಗಳ ನಿರ್ಮಾಣ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳನ್ನ ನಿರ್ಮಾಣ ಮಾಡಲಾಗಿದೆ. ಹಲವು ಶಾಲಾ ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿಗಳನ್ನ ಒದಗಿಸಲಾಗಿದೆ ಎಂದು ವಿವರಿಸಿದರು.
ಕ್ಷೇತ್ರದಲ್ಲಿ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಇದ್ದು ಬೇರೆ ರಾಜ್ಯ ಮತ್ತು ದೇಶದ ವಿದ್ಯಾರ್ಥಿಗಳು ವಿಧ್ಯಾಭ್ಯಾಸ ಪಡೆಯುತ್ತಿದ್ದಾರೆ.ಅವರಿಗೂ ಮೂಲಭೂತ ಸೌಕರ್ಯಗಳನ್ನ ನೀಡಲಾಗಿದೆ ಎಂದು ಹೇಳಿದರು.ನನ್ನ ಪತಿ ಅರವಿಂದ ಲಿಂಬಾವಳಿ ಅವರು ಮಾಡಿರುವ ಶಿಕ್ಷಣ ಕ್ಷೇತ್ರದ ಕ್ರಾಂತಿಯನ್ನು ಮುಂದುವರೆಸಲು ಅವರ ಪತ್ನಿ ಹಾಗೂ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಮಹದೇವಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಮುಂದುವರೆಸಲು ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು.ಮಾರತ್ತಹಳ್ಳಿ,ದೊಡ್ಡನೆಕ್ಕುಂದಿ, ಇಎಸಿಎಸ್ ವಾರ್ಡನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು,ಅಭಿವೃದ್ಧಿ ಕಾರ್ಯಗಳು ನನಗೆ ಗೆಲುವಿನ ಶೀರಕ್ಷೆ ನೀಡಲಿವೆ ಎಂದು ತಿಳಿಸಿದರು. ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಮನೋಹರರೆಡ್ಡಿ, ಮಾಜಿ ಅಧ್ಯಕ್ಷ ವೆಂಕಟಸ್ವಾಮಿ ರೆಡ್ಡಿ, ಮುಖಂಡರಾದ ಜಯದೇವ್,ಚಂದನ್,ವಿಜಯ್ ಕುಮಾರ್ ಇದ್ದರು.