ಬೆಂಗಳೂರು: ವಿಧಾನಸೌಧದಲ್ಲಿ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸ್ವಾಗತ ಭಾಷಣ ವೇಳೆ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ಡಿಸಿಎಂ ಹೇಳುವ ಬದಲಿಗೆ ಸಿಎಂ ಡಿ.ಕೆ ಶಿವಕುಮಾರ್ಗೆ ಸ್ವಾಗತ ಎಂದಿದ್ದಾರೆ.
ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮ
ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ. ರಿಯಾಯ್ತಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ. ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂಪಾಯಿ ಸಹಾಯ ಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ ಎಂದು ಸಿಎಂ ವಿವರಿಸಿದರು.
ಮೀನುಗಾರಿಕೆ ಮತ್ತು ಬಂದರು ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ಕಾರ ಮೀನುಗಾರ ಸಮುದಾಯಕ್ಕೆ ಮತ್ತು ಸಮುದಾಯದ ಮಕ್ಕಳಿಗೆ ನೀಡಿರುವ ಸರ್ಕಾರದ ಸವಲತ್ತುಗಳನ್ನು ವಿವರವಾಗಿ ಹೆಸರಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.