ಮಂಡ್ಯ: ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮನ್ಮುಲ್) ಅಧ್ಯಕ್ಷ ಸ್ಥಾನಕ್ಕೆ ಜುಲೈ 6ರಂದು ಚುನಾವಣೆ ನಿಗದಿಯಾಗಿದ್ದು, ಅಧ್ಯಕ್ಷ ಸ್ಥಾನಕ್ಕಾಗಿ ಜೆಡಿಎಸ್, ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸುವಂತಿಲ್ಲ. ಹೀಗಾಗಿ ರಾಜಕೀಯ ಪಕ್ಷಗಳ ಮುಖಂಡರು ಪಕ್ಷದ ಲೇಬಲ್ ಇಲ್ಲದೆ ಸಹಕಾರ ಸಂಘಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅದರಂತೆ 12 ನಿರ್ದೇಶಕರ ಬಲದ ಮನ್ಮುಲ್ನಲ್ಲಿ 7 ಮಂದಿ ಜೆಡಿಎಸ್ ಬೆಂಬಲಿತ ನಿರ್ದೇಶಕರಿದ್ದಾರೆ.
ಮೂರೂವರೆ ವರ್ಷ ಕಾಲ ಇವರಿಬ್ಬರೂ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅಧಿಕಾರ ನಡೆಸಿದ್ದಾರೆ. ಈ ಮಧ್ಯೆ ಜೆಡಿಎಸ್ ಪಕ್ಷದ ಆಂತರಿಕ ಒಪ್ಪಂದ ಮತ್ತು ಅಧಿಕಾರ ಹಂಚಿಕೆ ಸೂತ್ರದನ್ವಯ ಎರಡೂವರೆ ವರ್ಷಗಳ ಅಧಿಕಾರಾವಧಿ ಪೂರೈಸಿದ್ದ ರಾಮಚಂದ್ರ ಅವರು ತಿಂಗಳ ಹಿಂದೆ ಸಲ್ಲಿಸಿದ್ದ ರಾಜೀನಾಮೆ, ಮೇ 16ರಂದು ಅಂಗೀಕಾರವಾಗಿದೆ. ಹೀಗಾಗಿ ರಾಮಚಂದ್ರು ಅವರಿಂದ ತೆರವಾದ ಸ್ಥಾನಕ್ಕೆ ಜು.6ರಂದು ಚುನಾವಣೆ ನಿಗದಿಯಾಗಿದೆ