ಬೆಂಗಳೂರು: ನಾನು ಗ್ರಾಮೀಣ ಭಾಗದಿಂದ ಬಂದಿದ್ದರೂ, ಬೆಂಗಳೂರು ನಗರದ ಬಗ್ಗೆ ಅರಿತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಗರ ಈ ಮಟ್ಟಕ್ಕೆ ಬೆಳೆಯಲು ಸಾಕಷ್ಟು ಜನರು ಶ್ರಮವಹಿಸಿದ್ದಾರೆ.
ಬೆಂಗಳೂರು ಕಟ್ಟಿದ ಕೆಂಪೇಗೌಡರು, ನಂತರ ಕೆಂಗಲ್ ಹನುಮಂತಯ್ಯ ಸೇರಿದಂತೆ ಅನೇಕ ನಾಯಕರು ಬೆಂಗಳೂರು ಅಭಿವೃದ್ಧಿಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ಕಾರ್ಪೊರೇಟರ್ ಗಳು, ಹಲವು ನಾಯಕರು ಸಹ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಒಂದು ಕೋಟಿಗಿಂತ ಹೆಚ್ಚು ಜನರು ಇಲ್ಲಿ ವಾಸ ಮಾಡುತ್ತಾ ಇದ್ದಾರೆ. 40 ರಿಂದ 50 ಲಕ್ಷ ಜನ ಹೊರಗಿನಿಂದ ಬಂದು ಹೋಗುವುದನ್ನು ಮಾಡುತ್ತಾ ಇದ್ದಾರೆ ಎಂದು ಹೇಳಿದರು.
ವಿಶ್ವದ ಅನೇಕ ನಾಯಕರಿಗೆ, ಉದ್ಯಮಿಗಳಿಗೆ ಬೆಂಗಳೂರಿನ ಮೂಲಕ ಭಾರತವನ್ನು ನೋಡುವಂತಾಗಿದೆ. ಹಾಗಾಗಿ ಇಲ್ಲಿ ಹಚ್ಚಿನ ಸೌಲಭ್ಯವನ್ನ ಒದಗಿಸುವ ಕೆಲಸ ಆಗಬೇಕಿದೆ. ಇವತ್ತು ನಾನು ಈ ಸಭೆಯ ಮೂಲಕ ನಗರದ ಅಭಿವೃದ್ಧಿಯ ಕುರಿತು ಪಾಠ ಕಲಿತಿದ್ದೇನೆ.
ಬಿಬಿಎಂಪಿ ಬೆಂಗಳೂರಿನ ಅಭಿವೃದ್ಧಿಗಾಗಿ ಹಾಕಿಕೊಂಡಿರುವ ಯೋಜನೆಗಳ ಬಗ್ಗೆ ತಿಳಿದುಕೊಂಡಿದ್ದೇನೆ ಎಂದು ತಿಳಿಸಿದರು