ತಮಿಳುನಾಡು: ವಿಲವಂಕೋಡ್ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಎಸ್.ವಿಜಯಧರಣಿ ಅವರು ಶನಿವಾರ ನವದೆಹಲಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡರು.
ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಸಿ.ಮುರುಗನ್, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಮತ್ತು ಬಿಜೆಪಿ ತಮಿಳುನಾಡು ರಾಜ್ಯ ಬಿಜೆಪಿ ರಾಷ್ಟ್ರೀಯ ಸಹ-ಪ್ರಭಾರಿ ಪೊಂಗುಲೇಟಿ ಸುಧಾಕರ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು ಕೇಸರಿ ಪಕ್ಷಕ್ಕೆ ಸೇರಿದರು
ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯವರಾದ ವಿಜಯಧರಣಿ ಅವರು ಸಾಂಪ್ರದಾಯಿಕ ಕಾಂಗ್ರೆಸ್ ಕುಟುಂಬಕ್ಕೆ ಸೇರಿದವರು. ಅವರ ಕುಟುಂಬದ ಮೂರು ತಲೆಮಾರುಗಳು ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದವರು.